ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ಸಾವು…

48
firstsuddi

ಬೆಳಗಾವಿ: ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶಿರಪ್ಪೆವಾಡಿ ಗ್ರಾಮದಲ್ಲಿ ನಡೆದಿದೆ.

ಆಕಾಶ ಶಿವಸಾದ ಸಂಕಪಾಳ(27) ಮೃತ ದುರ್ದೈವಿ. ಇಂದು ಮುಂಜಾನೆ ಮನೆಯಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋದಾಗ ಈ ಅವಘಡ ಸಂಭವಿಸಿದೆ ಎಂದು ಮೃತ ಯುವಕನ ತಂದೆ ನಿಪ್ಪಾಣಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ನಿಪ್ಪಾಣಿ ಬಸವೇಶ್ವರ ಚೌಕ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.