ಮೈಸೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಪ್ರಧಾನಿ ನರೇಂದ್ರ ಮೋದಿಯವರು ಇಸ್ರೋ ಕಚೇರಿಗೆ ತೆರಳಿದ್ದರಿಂದ ರಾಜ್ಯಕ್ಕೆ ಪರಿಹಾರ ಕೊಡುವ ವಿಷಯ ಮಾತನಾಡಲು ಸಾಧ್ಯವಾಗಿಲ್ಲ. ಆದರೆ ಅವರಿಗೆ ರಾಜ್ಯದ ಪರಿಸ್ಥಿತಿ ಮೋದಿ ಅವರಿಗೆ ಗೊತ್ತಿದೆ. ಶೀಘ್ರದಲ್ಲಿಯೇ ಪರಿಹಾರ ಘೊಷಣೆ ಆಗುತ್ತದೆ. ದೆಹಲಿಗೆ ಹೋಗಿ ಇಲ್ಲಿನ ಎಲ್ಲಾ ಸಮಸ್ಯೆಗಳ ಬಗ್ಗೆ ಹೇಳಿದ್ದೇನೆ. ಈಗಾಗಲೇ ಅಮಿತ್ ಶಾ ಹಾಗೂ ನಿರ್ಮಲಾ ಸೀತಾರಾಮನ್ ಅವರು ಬಂದು ವೀಕ್ಷಣೆ ಮಾಡಿ ಹೋಗಿದ್ದಾರೆ. ವಾಸ್ತವಿಕ ಪರಿಸ್ಥಿತಿ ಅವರಿಗೂ ಗೊತ್ತಿದೆ. ಸೂಕ್ತ ಪರಿಹಾರ ಸಿಗುತ್ತದೆ ಎಂದು ಭರವಸೆ ನೀಡಿದರು.










