ಯಡಿಯೂರಪ್ಪ ಆಡಳಿತಕ್ಕೆ ಯಾವುದೇ ತೊಂದರೆ ಆಗಬಾರದೆಂದು ಅಭಿಮಾನಿಗಳಿಂದ ಈಡುಗಾಯಿ ಸೇವೆ…

75
firstsuddi

ಮಂಡ್ಯ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಸಿಎಂ ಯಡಿಯೂರಪ್ಪನವರ ಅಭಿಮಾನಿಗಳಿಂದ ಈಡುಗಾಯಿ ಸೇವೆ ಸಲ್ಲಿಸಲಾಯಿತು.

ಮುಂದಿನ ಎರಡು ವರ್ಷಗಳವರೆಗೂ ಯಡಿಯೂರಪ್ಪನವರೆ ಸಿಎಂ ಆಗಿ ಮುಂದುವರಿಯಬೇಕು. ಬಿ.ಎಸ್ ಯಡಿಯೂರಪ್ಪ ಅವರ ಆಡಳಿತಕ್ಕೆ ಯಾವುದೇ ತೊಂದರೆ ಆಗಬಾರದು, ಅರುಣ್ ಸಿಂಗ್ ಅವರು ಸಹ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಲ್ಲಬೇಕೆಂದು ಜಿಲ್ಲೆಯ ಕಾಳಮ್ಮ ದೇವಸ್ಥಾನದ ಮುಂಭಾಗ ಪೂಜೆ ಸಲ್ಲಿಸಿ ಅಷ್ಟ ದಿಕ್ಕುಗಳಿಗೂ ಈಡುಗಾಯಿ ಒಡೆದು ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.