ಲಕ್ನೋ: ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಕಾರು-ಬಸ್ ನಡುವೆ ಡಿಕ್ಕಿಯಾಗಿ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ವರದಿಗಳ ಪ್ರಕಾರ, ಅಪಘಾತಕ್ಕೀಡಾದ ಬಸ್ ಆಗ್ರಾದಿಂದ ನೋಯ್ಡಾಗೆ ತೆರಳುತ್ತಿತ್ತು. ಮಥುರಾದ ಮಹಾವಾನ್ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು, ನಂತರ ಅದೇ ಮಾರ್ಗವಾಗಿ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ನಂತರ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದವರು ಸಕಾಲದಲ್ಲಿ ಹೊರಬರಲು ಸಾಧ್ಯವಾಗದೆ ಐವರು ಸುಟ್ಟು ಕರಕಲಾಗಿದ್ದಾರೆ. ಆದ್ರೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನೂ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಅಪಘಾತದ ನಂತರ ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ.