ಉಡುಪಿ : ಯಾವುದೇ ಸಮುದಾಯ, ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆದಾಗಲ್ಲ ಎಂದು ಕೇಂದ್ರ ಕೃಷಿ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದರು.
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವಸ್ಥಾನ, ಮಸೀದಿ, ಚರ್ಚ್ ನಮ್ಮ ಶ್ರದ್ಧಾ ಕೇಂದ್ರಗಳು. ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಜವಾಬ್ದಾರಿ. ಅಕ್ರಮ ಸ್ಥಳದಲ್ಲಿ ಶ್ರದ್ಧಾಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಬೇಕು. ಸ್ಥಳೀಯ ಜನರ ಮನವೊಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಆನಂತರ ತೆರವು ಮಾಡುವ ಬಗ್ಗೆ ಸರಕಾರ ಯೋಚಿಸಬೇಕು ಎಂದರು.
ಶೃದ್ಧಾ ಕೇಂದ್ರಗಳ ಬಗ್ಗೆ ಜನರ ನಂಬಿಕೆ ಭಕ್ತಿ ಭಾವ ಪ್ರೀತಿ ಜಾಸ್ತಿ ಇರುತ್ತದೆ. ಅವರ ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ- ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗಲ್ಲ. ಅಕ್ರಮ ದೇವಾಲಯ ಕಂಡು ಬಂದರೆ ಊರಿನ ಜನರ ಮನವೊಲಿಸಿ ಇದು ರಾಜ್ಯ ಸರಕಾರಕ್ಕೆ ನನ್ನ ಪ್ರಾರ್ಥನೆ ಎಂದರು.
ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲ್ ವಿಚಾರದಲ್ಲಿ ಮಾತನಾಡಿದ ಸಚಿವೆ ಶೋಭಾ ಇಂದು ಲಕ್ನೋದಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲ್ ಬಂದರೆ ಜನರಿಗೆ ಅನುಕೂಲ ಆಗಬಹುದು. ಪ್ರಧಾನಿ ನರೇಂದ್ರ ಮೋದಿ ಈ ಪ್ರಯತ್ನದಲ್ಲಿದ್ದಾರೆ ಇವತ್ತು ಕೈಗೊಳ್ಳಬಹುದಾದ ನಿರ್ಧಾರವನ್ನು ದೇಶ ಸ್ವಾಗತಿಸುತ್ತದೆ ಎಂಬ ನಂಬಿಕೆ ನನಗಿದೆ ಎಂದರು.










