ಯುಗಾದಿ ಹಬ್ಬಕ್ಕೆ ಸೀರೆ ಹಂಚಿಕೆ – ಬೆಂಕಿ ಹಚ್ಚಿ ಬಿಜೆಪಿ ಕಾರ್ಯಕರ್ತರಿಗೆ ಕ್ಲಾಸ್ ತೆಗೆದುಕೊಂಡ ಮತದಾರರು…

83
firstsuddi

ಚಿಕ್ಮಮಗಳೂರು : ಚುನಾವಣೆ ನೆಪದಲ್ಲಿ ಯುಗಾದಿ ಹಬ್ಬಕ್ಕೆ ಸೀರೆ ಹಂಚಲು ಬಂದಿದ್ದ ಬಿಜೆಪಿ ಶಾಸಕ ಸಿ.ಟಿ ರವಿ ಅವರ ಬೆಂಬಲಿಗರಿಗೆ ಮತದಾರರು ಕ್ಲಾಸ್ ತೆಗೆದುಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.

ನಿನ್ನೆ ರಾತ್ರಿ ಬಿಜೆಪಿ ಕಾರ್ಯಕರ್ತರು ತಾಲೂಕಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿಯಲ್ಲಿ ಯುಗಾದಿ ಹಬ್ಬಕ್ಕೆ ಗಿಫ್ಟ್ ರೂಪದಲ್ಲಿ ಮತದಾರರಿಗೆ ಸೀರೆಗಳನ್ನು ಹಂಚಿದ್ದಾರೆ. ಆದರೆ ಕೊರೊನಾ ಸಂದರ್ಭದಲ್ಲಿ ಒಂದು ಕೆಜಿ ಅಕ್ಕಿ ಕೊಟ್ಟಿಲ್ಲ. ಈಗ ಎಲೆಕ್ಷನ್ ಬಂತು ಅಂತ ಸೀರೆ ಹಂಚಲು ಬಂದಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಸೀರೆಗಳಿಗೆ ಬೆಂಕಿಯಿಟ್ಟು ಸುಟ್ಟು ಹಾಕಿದರು.

ಜನರ ಕೋಪ ಎದುರಿಸಲಾಗದೆ ಬಿಜೆಪಿ ಕಾರ್ಯಕರ್ತರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.