ಯುವಕನೊಂದಿಗೆ ಮಹಿಳೆ ಅಕ್ರಮ ಸಂಬಂಧ- ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಜೋಡಿ…

54
firstsuddi

ಕೋಲಾರ: ಅಕ್ರಮ ಸಂಬಂಧ ಹೊಂದಿದ್ದ ಯುವಕ ಹಾಗೂ ಮಹಿಳೆ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಎಸ್.ಜೀಡಮಾಕಲಪಲ್ಲಿ ಗ್ರಾಮದಲ್ಲಿ ನಡೆದಿದೆ.

ಅನಸೂಯ (35) ಹಾಗೂ ವಿಜಯ್ ಕುಮಾರ್(28) ಆತ್ಮಹತ್ಯೆ ಮಾಡಿಕೊಂಡವರು. ಅನಸೂಯ, ಮಂಜುನಾಥ್ ಎಂಬುವರೊಂದಿಗೆ ವಿವಾಹವಾಗಿ ಇಬ್ಬರು ಮಕ್ಕಳು ಇದ್ದರು. ವಿಜಯ್ ಕುಮಾರ್ ಅವಿವಾಹಿತನಾಗಿದ್ದನು. ವಿಜಯ್ ಕುಮಾರ್ ಅನಸೂಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಹೇಳಲಾಗುತ್ತಿದೆ. ಅಲ್ಲದೇ ಇವರಿಬ್ಬರು ಕಳೆದ ಎರಡು ತಿಂಗಳ ಹಿಂದೆ ಊರು ಬಿಟ್ಟು ನಾಪತ್ತೆಯಾಗಿದ್ದರು.

ಕಳೆದ ರಾತ್ರಿ ಗ್ರಾಮದ ಹೊರಗಿನ ಮರಕ್ಕೆ ನೇಣು ಬಿಗಿದುಕೊಂಡು ಈ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.