ಯುವ ಕಾಂಗ್ರೇಸ್ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುವ ಸಂಕಲ್ಪ ಮಾಡಬೇಕು : ಬಸವನಗೌಡ ಬಾದರ್ಲಿ…

374
firstsuddi

ಚಿಕ್ಕಮಗಳೂರು : ಯುವ ಕಾಂಗ್ರೇಸ್ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯುವ ಸಂಕಲ್ಪ ಮಾಡಬೇಕು ಎಂದು ಯುವ ಕಾಂಗ್ರೇಸ್ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ ಮನವಿ ಮಾಡಿದರು.ನಗರದ ಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಯುವ ಕಾಂಗ್ರೇಸ್‍ನ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯುವ ಕಾಂಗ್ರೇಸ್ ಮತ್ತು ವಿದ್ಯಾರ್ಥಿ ಕಾಂಗ್ರೇಸ್ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಕಾಂಗ್ರೇಸ್‍ನ ಆಧಾರ ಸ್ತಂಭಗಳು, ಅವರ ಮೇಲೆ ಪಕ್ಷ ನಿಂತಿದೆ, ಅವರುಗಳು ಪಕ್ಷಕ್ಕಾಗಿ ದುಡಿಯುವ ಸಂಕಲ್ಪ ಮಾಡಿ ಹೋರಾಟಕ್ಕೆ ಮುಂದಾದರೆ ದೇಶದಲ್ಲಿ ಮತ್ತೆ ಕಾಂಗ್ರೇಸ್ ಜಯಭೇರಿ ಬಾರಿಸುತ್ತದೆ ಎಂದರು.ಯುವ ಕಾಂಗ್ರೇಸ್ ಕಾರ್ಯಕರ್ತರು ಇದನ್ನು ಅರಿಯಬೇಕು, ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸಂಘಟಿತರಾಗಬೇಕು, ಒಗ್ಗೂಡಿ ಪಕ್ಷಕ್ಕಾಗಿ ದುಡಿಯಬೇಕು ಎಂದು ಕಿವಿಮಾತು ಹೇಳಿದರು.

ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ಮಾತನಾಡಿ ಪಕ್ಷ ಸಂಕಷ್ಟದಲ್ಲಿರುವ ಇಂದಿನ ಪರಿಸ್ಥಿತಿಯಲ್ಲಿ ಅದನ್ನು ಮತ್ತೆ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ಮತ್ತು ಜವಾಬ್ದಾರಿ ಯುವ ಕಾಂಗ್ರೇಸ್ ಕಾರ್ಯಕರ್ತರ ಮೇಲಿದೆ ಎಂದು ತಿಳಿಸಿದರು.ಯುವ ಕಾಂಗ್ರೇಸ್ ಕಾರ್ಯಕರ್ತರು ಈಗ ಬಲಾಡ್ಯರಾಗಬೇಕು, ಪಕ್ಷವನ್ನು ಗಟ್ಟಿಗೊಳಿಸುವ ಕೆಲಸ ಮಾಡಬೇಕು, ಕಾಂಗ್ರೇಸ್ ಈ ಬಾರಿ ನಗರಸಭೆ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ಸಂಘಟಿತ ಹೋರಾಟ ನಡೆಸಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಯುವ ಕಾಂಗ್ರೇಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪುಷ್ಪಲತಾ, ಜಿಲ್ಲಾ ಉಪಾಧ್ಯಕ್ಷರಾದ ಆದಿತ್ಯ, ಜೆ.ವಿನಾಯಕ, ಪ್ರಧಾನ ಕಾರ್ಯದರ್ಶಿಗಳಾದ ಕೌಶಿಕ್, ಮಧು, ಹರ್ಷವರ್ಧನ್, ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಾಹಿಲ್ ಷರೀಫ್, ಸಂತೋಷ್, ಶ್ರೀನಿವಾಸ್, ಸುರೇಶ್, ಗಂಗಾಧರ್ ಉಪಸ್ಥಿತರಿದ್ದರು.ಯುವ ಕಾಂಗ್ರೇಸ್‍ನ ವಿವಿಧ ತಾಲ್ಲೂಕು ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.