ಯೂನಿಯನ್ ಬಜೆಟ್ 2025: ಆದಾಯ ತೆರಿಗೆ ವಿನಾಯಿತಿ ಮಿತಿ 12 ಲಕ್ಷಕ್ಕೆ ಏರಿಕೆ.

37

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಸಂಸತ್ ಇತಿಹಾಸದಲ್ಲಿ ಹೆಚ್ಚು ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಾವು ಮಂಡಿಸುತ್ತಿರುವ ಕೇಂದ್ರ ಬಜೆಟ್ ನಲ್ಲಿ ಮಧ್ಯಮ ವರ್ಗದ ಬಹು ದಿನಗಳ ಬೇಡಿಕೆ ಕೊನೆಗೂ ಈಡೇರಿಸಿದ್ದು ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 12 ಲಕ್ಷಕ್ಕೆ ಏರಿಕೆ ಮಾಡಿದ್ದಾರೆ. ಈ ಬಗ್ಗೆ ಸಂಸತ್ ಭವನದಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಏರಿಕೆ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಂದರೆ 12 ಲಕ್ಷ ರೂಪಾಯಿಗಳವರೆಗಿನ ಆದಾಯದ ಮೇಲೆ ಯಾವುದೇ ಆದಾಯ ತೆರಿಗೆ ಇರುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಹೊಸ ತೆರಿಗೆ ಪದ್ಧತಿ ಅಡಿಯಲ್ಲಿ 12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ. ಆದರೆ 4 ಲಕ್ಷದಿಂದ 8 ಲಕ್ಷದವರೆಗೆ ಶೇಕಡ 5ರಷ್ಟು ತೆರಿಗೆ ವಿಧಿಸಲಾಗಿದ್ದು, 8 ಲಕ್ಷದಿಂದ 11 ಲಕ್ಷದವರೆಗೆ ಶೇಕಡ 10ರಷ್ಟು ತೆರಿಗೆ ವಿಧಿಸಲಾಗಿದೆ. 12 ಲಕ್ಷದಿಂದ 15 ಲಕ್ಷದವರೆಗೆ ಶೇಕಡ 15ರಷ್ಟು ತೆರಿಗೆ ಮತ್ತು 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ, 20 ಲಕ್ಷದಿಂದ 24 ಲಕ್ಷದರೆಗೆ ಶೇಕಡ 25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇಕಡ 30ರಷ್ಟು ತೆರಿಗೆ ವಿಧಿಸಲಾಗಿದೆ ಎಂದು ವಿತ್ತ ಸಚಿವರು ಹೇಳಿದ್ದಾರೆ.