ಶ್ರೀನಗರ : ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳೀ ನಡೆಸಿದ್ದು, ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರಾದ ಗಾಂದರ್ಬಲ್ ನಲ್ಲಿ ಇರುವ ಸಿ.ಆರ್.ಪಿ.ಎಫ್ 115ನೇ ಬೆಟಾಲಿಯನ್ ಗುರಿಯಾಗಿಸಿಕೊಂಡು ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಪರಿಣಾಮ ಮೂವರು ಯೋಧರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.










