ರಮೇಶ್‍ಗೆ ಮುಖ್ಯಮಂತ್ರಿ ಅಥವಾ ಪ್ರಧಾನಿ ಹುದ್ದೆ ಕೊಟ್ಟರೂ ಸರ್ಕಾರ ಬೀಳಿಸುವ ಪ್ರಯತ್ನ ಬಿಡುವುದಿಲ್ಲ : ಸತೀಶ್ ಜಾರಕಿಹೊಳಿ…

239
firstsuddi

ಬೆಳಗಾವಿ : ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಸಹೋದರ ರಮೇಶ್ ಜಾರಕಹೊಳಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದು, ರಮೇಶ್ ಜಾರಕಿಹೊಳಿ ಪಕ್ಷಕ್ಕೆ ಯಾವುದೇ ಕಾರಣಕ್ಕೂ ವಾಪಸ್ ಬರುವುದಿಲ್ಲ. ಅವನಿಗೆ ಮುಖ್ಯಮಂತ್ರಿ ಅಥವಾ ಪ್ರಧಾನಿ ಹುದ್ದೆ ಕೊಟ್ಟರೂ ಸರ್ಕಾರ ಬೀಳಿಸುವ ಆಲೋಚನೆಯಷ್ಟೇ ಅವನ ತಲೆಯಲ್ಲಿದೆ. ರಮೇಶ್ ಸರ್ಕಾರ ಬೀಳಿಸುವ ಕೆಲಸವನ್ನು ಮಾತ್ರ ಬಿಡುವುದಿಲ್ಲ. ಈಗಾ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲದೆ ಸುಭದ್ರವಾಗಿದೆ. ಸಮ್ಮಿಶ್ರ ಸರ್ಕಾರದ ಪತನಕ್ಕೆ ಬಿಜೆಪಿ ಪಕ್ಷ ಹಿಂದಿನಿಂದ ಕೆಲ ಮಾಡುತ್ತಿದ್ದು, ಶಾಸಕರನ್ನು ರಾಜೀನಾಮೆ ಕೊಡಿಸಿ ಮುಂಬೈಗೆ ಕಳುಹಿಸಿದ್ದಾರೆ. ಬಿಜೆಪಿ ಹಣದಿಂದ ಸರ್ಕಾರವನ್ನು ಬೀಳಿಸಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.