ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ ಸಿಎಂ ಯಡಿಯೂರಪ್ಪ.

130
Firstsuddi

ಬೆಂಗಳೂರು : ಸಿಡಿ ಬಯಲಿಗೆ ಬಂದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಸಲ್ಲಿಸಿದ ರಾಜೀನಾಮೆಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪನವರು ಅಂಗೀಕರಿಸಿದ್ದಾರೆ.

ಸಿಎಂ ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ಅವರು ರಾಜಿನಾಮೆ ಪತ್ರ ರವಾನಿಸಿದ್ದು, ಈ ಘಟನೆಯಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಒಂದೇ ಒಂದು ಕಾರಣದಿಂದಾಗಿ ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. ತನಿಖೆ ಬಳಿಕ ನಾನು ನಿರ್ದೋಷಿ ಎಂದು ಬಹಿರಂಗವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.