ರಮೇಶ್ ಜಾರಕಿಹೊಳಿ, ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ : ಬೊಮ್ಮಾಯಿ.

58
firstsuddi

ಬೆಳಗಾವಿ : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನಗರದ ಸುವರ್ಣ ವಿಧಾನಸೌಧದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನಕ್ಕೆ ಭಾಗಿಯಾಗದೆ ಇರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್.ಈಶ್ವರಪ್ಪ ಅವರು ವಿಧಾನಮಂಡಲ ಅಧಿವೇಶನದಲ್ಲಿ ಭಾಗವಹಿಸದೇ ಇರುವುದು ಬಹಿಷ್ಕಾರವಲ್ಲ. ತಮ್ಮ ಮೇಲಿದ್ದ ಪ್ರಕರಣಗಳಲ್ಲಿ ಮುಕ್ತರಾದ ಮೇಲೆ ಮತ್ತೊಮ್ಮೆ ಸಂಪುಟಕ್ಕೆ ಸೇರಬೇಕೆನ್ನುವ ಅವರ ಚಿಂತನೆ ಸರಿಯಿದೆ. ಅವರ ವಿಚಾರವನ್ನು ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಚರ್ಚೆ ಮಾಡಿದ್ದೇನೆ. ಅವರು ಕೂಡ ಸಕರಾತ್ಮಕ ಸ್ಪಂದಿಸಿದ್ದಾರೆ. ಕೆಲವು ವಿಚಾರಗಳನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು.

ಮೀಸಲಾತಿ ಸಂಬಂಧ ತುರ್ತಾಗಿ ವರದಿ ಮಂಡಿಸುವಂತೆ ಸರ್ಕಾರ, ಖಾಯಂ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದೆ. ಆ ವರದಿ ಮಂಡಿಸಿದ ತಕ್ಷಣ ಕಾನೂನಾತ್ಮಕ ಏನು ಮಾಡಬಹುದೋ ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.

ಸಿಬಿಐ ದಾಳಿ ಬಗ್ಗೆ ಡಿ.ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಸಾಂವಿಧಾನಾತ್ಮಕವಾಗಿ ಸ್ವಾಯತ್ತವಾಗಿರುವ ಸಂಸ್ಥೆ ಸಿಬಿಐ ಆಗಿದೆ. ಅವರು ಪ್ರಕರಣಕ್ಕನುಗುಣವಾಗಿ ಕ್ರಮ ಕೈಗೊಳ್ಳುತ್ತಾರೆ. ಇದು ಡಿ.ಕೆ.ಶಿವಕುಮಾರ್ ಅವರಿಗೂ ತಿಳಿದಿರುವ ವಿಚಾರ ಎಂದು ಹೇಳಿದರು.