ರಷ್ಯಾ-ಉಕ್ರೇನ್ ಯುದ್ಧ – ಕದನ ವಿರಾಮ ಘೋಷಿಸಿದ ರಷ್ಯಾ.

67
firstsuddi

ಕೀವ್ : ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ನಾಗರಿಕರಿಗೆ ಮಾನವೀಯ ಕಾರಿಡಾರ್ ಗಳನ್ನು ತೆರೆಯುವ ಉದ್ದೇಶದಿಂದ ರಷ್ಯಾ ಕದನ ವಿರಾಮ ಘೋಷಿಸಿದೆ.

ಗ್ರೀನ್​ವಿಚ್ ಮೀನ್ ಟೈಮ್ ಸಮಯ 6ರಿಂದ (ಭಾರತೀಯ ಕಾಲಮಾನ ಬೆಳಗ್ಗೆ 11.30) ಕದನ ವಿರಾಮ ಘೋಷಿಸುವುದಾಗಿ ರಷ್ಯಾ ತಿಳಿಸಿದೆ. ಮಾರಿಯುಪೋಲ್ ಮತ್ತು ವೊಲ್ನೋವಾಖಾದಿಂದ ನಾಗರಿಕರನ್ನು ಸ್ಥಳಾಂತರ ಮಾಡಲು ಕದನ ವಿರಾಮ ಘೋಷಣೆ ಮಾಡಲಾಗಿದೆ.

ಇದು ತಾತ್ಕಾಲಿಕ ಯುದ್ಧ ವಿರಾಮ ಘೋಷಣೆಯಷ್ಟೇ. ಎಷ್ಟು ಹೊತ್ತಿನವರೆಗೆ ಅಥವಾ ದಿನಗಳವರೆಗೆ ಇರುತ್ತದೆ ಎಂದು ಕಾದುನೋಡಬೇಕಿದೆ.

ಉಕ್ರೇನ್ ವಿರುದ್ಧ ರಷ್ಯಾ ಭೀಕರ ಯುದ್ಧ ನಡೆಸುತ್ತಿದ್ದು, ಅಲ್ಲಿ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಭಾರತ ಅವರೆಲ್ಲರನ್ನೂ ಸ್ಥಳಾಂತರಿಸುವ ಕಾರ್ಯ ಮಾಡುತ್ತಿದ್ದರೂ ಹಲವರು ಇನ್ನೂ ಯುದ್ಧದ ಪರಿಸ್ಥಿತಿಯಿಂದ ತಪ್ಪಿಸಿಕೊಂಡು ಸುರಕ್ಷಿತ ಸ್ಥಳಕ್ಕೆ ಮರಳಲು ಸಾಧ್ಯವಾಗುತ್ತಿಲ್ಲ. ಸ್ಥಳೀಯ ಮಟ್ಟದಲ್ಲಿ ಕದನ ವಿರಾಮ ಘೋಷಿಸುವಂತೆ ರಷ್ಯಾ ಹಾಗೂ ಉಕ್ರೇನ್ ಗೆ ಭಾರತ ಮನವಿ ಮಾಡಿತ್ತು.