ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಡಿಕ್ಕಿ – ಬಾಲಕಿ ಸಾವು…

48
firstsuddi

ಚಿಕ್ಕಬಳ್ಳಾಪುರ: ದೇವಸ್ಥಾನಕ್ಕೆ ತೆರಳಿ ತಾಯಿ ಜೊತೆ ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ತಾಲೂಕಿನ ಮುದ್ದೇನಹಳ್ಳಿ ಬಳಿಯ ಪಂವಚಟಿ ಶಾಲೆ ಬಳಿ ನಡೆದಿದೆ.

ಮುದ್ದೇನಹಳ್ಳಿ ಗ್ರಾಮದ ಕಾಂತರಾಜು ಮತ್ತು ಶ್ಯಾಮಲ ದಂಪತಿಯ ಮಗಳು ಜಾನುಶ್ರೀ (7) ಮೃತ ಬಾಲಕಿ. ಹಿಂಬದಿಯಿಂದ ಅತಿವೇಗವಾಗಿ ಬಂದ ಬೈಕ್ ಬಾಲಕಿಗೆ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಜಾನುಶ್ರೀಗೆ ಸತ್ಯಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಜಾನುಶ್ರೀ ಸಾವನ್ನಪ್ಪಿದ್ದಾಳೆ.

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬೈಕ್ ಸವಾರನ ವಿರುದ್ಧ ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.