ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಸಾವು…

60
firstsuddi

ಬೆಂಗಳೂರು : ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹೆಚ್.ಬಿ ಚನ್ನಬಸಪ್ಪ (54) ಮೃತ ಯೋಧ. ಚನ್ನಬಸಪ್ಪ ಹಾಸನ ಜಿಲ್ಲೆ, ಆಲೂರು ತಾಲೂಕಿನ ಚಿಕ್ಕಕಣಗಾಲು-ಹೊಸಳ್ಳಿ ಗ್ರಾಮದವರು. ನವೆಂಬರ್ 19 ರಂದು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಬೆಂಗಳೂರಿನ ಹುಣಸಮಾರನಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚನ್ನಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.

1968 ರಲ್ಲಿ ಭಾರತೀಯ ಸೇನೆಗೆ ಸೇರಿದ್ದ ಚನ್ನಬಸಪ್ಪ ಭಾರತೀಯ ಸೇನೆ, ಭೂಸೇನೆ, ವಾಯುಸೇನೆ, ಜಲಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಇತ್ತೀಚೆಗೆ ಚನ್ನಬಸ್ಸಪ್ಪ ಯಲಹಂಕ ವಾಯುನೆಲೆಯ ಡಿಎಸ್ ಸಿ ಯೂನಿಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಂದು ತಮ್ಮ ಹುಟ್ಟೂರಿನಲ್ಲಿ ಸಕಲ ಮಿಲಿಟರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.