ರಸ್ತೆ ಅಪಘಾತದಲ್ಲಿ ಮೃತಪಟ್ಟ ಪತ್ರಕರ್ತನ ಕುಟುಂಬಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಂದ 5ಲಕ್ಷ ರೂ ಪರಿಹಾರ ಘೋಷಣೆ…

234
firstsuddi

ಬೆಂಗಳೂರು : ರಸ್ತೆ ಅಪಘಾತದಲ್ಲಿ ಮೃತಪಟ್ಟ ಪ್ರಜಾವಾಣಿಯ ಹಾವೇರಿ ಜಿಲ್ಲಾ ಹಿರಿಯ ವರದಿಗಾರ ಮಂಜುನಾಥ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 5ಲಕ್ಷ ರೂ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಮಂಜುನಾಥ್ ಅವರು ನಿನ್ನೆ ಸಂಜೆ ಕೆಲಸ ಮುಗಿಸಿ ಬೈಕಿನಲ್ಲಿ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಟ್ರ್ಯಾಕ್ಟರ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.