ರಸ್ತೆ ಅಪಘಾತದಲ್ಲಿ ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಪುತ್ರ ಸಾವು…

153
firstsuddi

ಹುಬ್ಬಳ್ಳಿ : ರಸ್ತೆ ಅಪಘಾತದಲ್ಲಿ ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ ಪುತ್ರ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ಮೈಕ್ರೋಫಿನಿಶ್ ಫ್ಯಾಕ್ಟರಿ ಬಳಿ ನಿನ್ನೆ ತಡರಾತ್ರಿ ನಡೆದಿದೆ.

ತಿಲಕ್ ಕಲಬುರ್ಗಿ (22) ಮೃತ ದುರ್ದೈವಿ. ನುಗ್ಗಿಕೇರಿ ಹನುಮಾನ್ ದೇವಸ್ಥಾನಕ್ಕೆ ಹೋಗಿ ವಾಪಸ್ ಬರುವಾಗ ರಸ್ತೆಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಪರಿಣಾಮ ತಿಲಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆತನ ಸ್ನೇಹಿತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.