ರಸ್ತೆ ಅಫಘಾತದಲ್ಲಿ ಯಕ್ಷಗಾನ ಕಲಾವಿದ ಸಾವು…

119
firstsuddi

ಮಂಗಳೂರು : ಬೈಕ್​ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಯಕ್ಷಗಾನ ಕಲಾವಿದರೋರ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ವೇಣೂರು ವಾಮನಕುಮಾರ್ (46) ಮೃತ ಯಕ್ಷಗಾನ ಕಲಾವಿದ.

ಇವರು ಹಿರಿಯಡ್ಕ ಮೇಳ ಕಲಾವಿದರಾಗಿದ್ದು, ಕುಂದಾಪುರದ ಕೊಂಕಿ ಎಂಬಲ್ಲಿ ಯಕ್ಷಗಾನ ಪ್ರದರ್ಶನ ಮುಗಿಸಿ ಮನೆಗೆ ಬೈಕ್ ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಮೂಡಬಿದಿರೆಯ ಗಂಟಾಲ್ ಕಟ್ಟೆ ಎಂಬಲ್ಲಿ ಇವರ ಬೈಕ್​ಗೆ ಓಮಿನಿ ಕಾರು ಡಿಕ್ಕಿ ಹೊಡೆದಿದ್ದು, ವಾಮನಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಮೂಡಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.