ರಸ್ತೆ ಪಕ್ಕದಲ್ಲಿ ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿದ ವ್ಯಕ್ತಿ!

55
firstsuddi

ಬೆಂಗಳೂರು : ವ್ಯಕ್ತಿಯೊಬ್ಬ ರಸ್ತೆ ಪಕ್ಕದಲ್ಲಿ ಮಲಗಿದ್ದ ನಾಯಿಯ ಮೇಲೆ ಕಾರು ಹತ್ತಿಸಿ ದರ್ಪ ಮೆರೆದಿರುವ ಘಟನೆ ನಗರದ ಹೊರಮಾವು ಬಳಿಯ ಬಂಜಾರ ಲೇಔಟ್ ನಲ್ಲಿ ನಡೆದಿದೆ.

ವ್ಯಕ್ತಿ ತನ್ನ ಕಾರಿನಲ್ಲಿ ಅಪಾರ್ಟ್‍ಮೆಂಟ್​ಗೆ ಹೋಗುವಾಗ ಮುಂಭಾಗದ ಗೇಟ್ ಬಳಿ ನಾಯಿ ಮಲಗಿರುವುದನ್ನು ನೋಡಿದ್ದಾನೆ. ನಾಯಿ ಇರುವುದು ಗೊತ್ತಿದ್ದರೂ ಸಹ ನಾಯಿಯ ಮೇಲೆಯೇ ಕಾರು ಹತ್ತಿಸಿಕೊಂಡು ಹೋಗಿದ್ದಾನೆ. ಘಟನೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕಾರು ಹತ್ತಿಸಿದ ವ್ಯಕ್ತಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಸಮೇತ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೃತ್ಯ ಎಸಗಿದ ವ್ಯಕ್ತಿ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿ ಬಂದಿದೆ.