ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಹುರಿದ ಬೆಂಕಿಪೊಟ್ಟಣ ಸಾಗಿಸುತ್ತಿದ್ದ ಲಾರಿ…

161

ವಿಜಯಪುರ : ಬೆಂಕಿಪೊಟ್ಟಣವನ್ನು ಸಾಗಿಸುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಹುರಿದಿರುವ ಘಟನೆ ತಾಲ್ಲೂಕಿನ ಅರಕೇರಿ ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದಿದೆ. ತಮಿಳುನಾಡು ಮೂಲದ ಲಾರಿ ತಮಿಳುನಾಡಿನಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಬೆಂಕಿಪೊಟ್ಟಣಗಳನ್ನು ಸಾಗಿಸುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಆವರಿಸುತ್ತಿದ್ದಂತೆ ಲಾರಿ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲೇ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.