ಬೆಂಗಳೂರು : ಸ್ಯಾಂಡಲ್‍ವುಡ್‍ನ ನಟ ಯಶ್ ಅವರು 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಯಶ್ ಅಭಿಮಾನಿಗಳು ಸೇರಿದಂತೆ ಸಿನಿಮಾರಂಗದವರಿಂದ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ಯಶ್ ಜನ್ಮದಿನಕ್ಕೆ ಕೇವಲ ಕರ್ನಾಟಕದ ಫ್ಯಾನ್ಸ್ ಮಾತ್ರವಲ್ಲದೆ, ಆಂಧ್ರ ಪ್ರದೇಶ, ತಮಿಳು ನಾಡು, ಮಹಾರಾಷ್ಟ್ರ ಮೊದಲಾದ ರಾಜ್ಯಗಳ ಅಭಿಮಾನಿಗಳು ವಿಶ್ ಮಾಡುತ್ತಿದ್ದಾರೆ.
ಅಭಿಮಾನಿಗಳ ಜೊತೆ ಯಶ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ಅವರು ಇತ್ತೀಚೆಗೆ ಮಾಹಿತಿ ಹಂಚಿಕೊಂಡಿದ್ದರು. ಈ ಬಾರಿ ಮತ್ತೆ ಕೊವಿಡ್ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಅಭಿಮಾನಿಗಳು ಬಂದು ಬರ್ತ್ಡೇ ಆಚರಣೆ ಮಾಡುವುದು ಸರಿಯಲ್ಲ ಅನಿಸುತ್ತದೆ. ಎಲ್ಲರೂ ಎಲ್ಲಿದ್ದೀರೋ ಅಲ್ಲಿಂದಲೇ ವಿಶ್ ಮಾಡಿ ಸಾಕು ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು.
ಇಂದು ಯಶ್ ಜನ್ಮದಿನದ ಹಿನ್ನೆಲೆಯಲ್ಲಿ ಕೆಜಿಎಫ್-2 ಚಿತ್ರ ತಂಡದಿಂದ ಅಭಿಮಾನಿಗಳಿಗೆ ವಿಶೇಷ ಗಿಫ್ಟ್ ಲಭಿಸಿದೆ. ಹೊಂಬಾಳೆ ಸಂಸ್ಥೆಯು ಬಹುನಿರೀಕ್ಷಿತ ಚಿತ್ರದ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿಕ್ವೆಲ್ ಗೆ ಭಾರಿ ಬೇಡಿಕೆ ಇದ್ದು, ಏಪ್ರಿಲ್ 14ರಂದು ಚಿತ್ರ ಬಿಡುಗಡೆ ಆಗಲಿದೆ.










