ರಾಜಕೀಯ ನಿವೃತ್ತಿ ಹೇಳಿಕೆ ವಾಪಸ್ ಪಡೆದ ಎಸ್.ಅಂಗಾರ

88
firstsuddi

ಮಂಗಳೂರು: ರಾಜಕೀಯ ನಿವೃತ್ತಿ ಹೇಳಿಕೆಯನ್ನು ಸುಳ್ಯದ ಬಿಜೆಪಿ ಶಾಸಕ ಎಸ್ ಅಂಗಾರ ವಾಪಸ್ ಪಡೆದಿದ್ದಾರೆ.

ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದ ಎಸ್.ಅಂಗಾರ, ರಾಜಕೀಯ ನಿವೃತ್ತಿ ಘೋಷಿಸಿದ್ದರು. ಆದರೆ ಇದೀಗ ಹಿರಿಯ ನಾಯಕರ ಮಾತುಕತೆ ಬಳಿಕ ತಮ್ಮ ನಿರ್ಧಾರವನ್ನು ಬದಲಾಯಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆಯನ್ನು ನೋವಿನಿಂದ ಹೇಳಿದ್ದೆ. ಆದರೆ ಈಗ ನಾನು ಮೊದಲಿನಂತೆ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆಯಾಗಿದೆ. ವೈಯಕ್ತಿಕವಾಗಿ ನೀಡಿದ ಆ ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂದರು.

ಆಯ್ಕೆ ಮಾಡಿದ ಅಭ್ಯರ್ಥಿ ಬಗ್ಗೆ ಬೇಸರ ಇಲ್ಲ, ಅವರ ಪರ ಕೆಲಸ ಮಾಡೋದು ನನ್ನ ಹೊಣೆಗಾರಿಕೆಯಾಗಿದೆ. ನನ್ನ ಕಾರ್ಯಕರ್ತರು ಜೊತೆ ನಿಂತಿದ್ದಕ್ಕೆ ಧನ್ಯವಾದಗಳು. ನನಗೆ ಯಾವುದೇ ಅಸಮಾಧಾನ ಮತ್ತು ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ನಾನು ಬೇಸರದಲ್ಲಿ, ಉದ್ವೇಗದಲ್ಲಿ ಹೇಳಿದ ಮಾತನ್ನು ವಾಪಸ್ ಪಡೆಯುತ್ತೇನೆ. ಮುಂದೆ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಗೆಲ್ಲಿಸುವುದು ನನ್ನ ಗುರಿಯಾಗಿದೆ ಎಂದು ಹೇಳಿದರು.