ರಾಜಕೀಯ ಪ್ರವೇಶಕ್ಕೆ ಡಾ. ಮಂಜುನಾಥ್ ಒಪ್ಪಿಗೆ, ನಾಳೆ ಬಿಜೆಪಿ ಸೇರ್ಪಡೆ: ಆರ್ ಅಶೋಕ್ ಸ್ಪಷ್ಟನೆ…

46
firstsuddi

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಮಂಜುನಾಥ್ ರಾಜಕೀಯ ಪ್ರವೇಶಕ್ಕೆ ಸಮ್ಮತಿಸಿದ್ದು, ಬಿಜೆಪಿ ಮೂಲಕ ರಾಜಕೀಯಕ್ಕೆ ಬರಲಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಂಜುನಾಥ್ ಸಮಾಜ ಸೇವೆಯ ಕೆಲಸ ಮಾಡಿದ್ದಾರೆ. ಜಯದೇವ ಸಂಸ್ಥೆಯಲ್ಲಿ ಅವರ ಸೇವೆ ಅನನ್ಯವಾಗಿದೆ. ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿದೆ. ಮಂಜುನಾಥ್ ಅವರೊಂದಿಗೂ ಸಮಾಲೋಚನೆ ನಡೆಸಲಾಗಿದೆ. ಅವರು ಸ್ಪರ್ಧಿಸಲು ಒಪ್ಪಿದ್ದಾರೆ. ನಾಳೆ ಅವರು ಪಕ್ಷ ಸೇರುವ ಸಾಧ್ಯತೆ ಇದೆ. ಸೇರ್ಪಡೆ ಕುರಿತು ಪಕ್ಷದ ಕಚೇರಿಯಿಂದ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ತಿಳಿಸಿದರು.