ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ- ಎಫ್ಐಆರ್ ದಾಖಲು…

48
firstsuddi

ಬೆಂಗಳೂರು: ಸ್ಕೂಲ್ ಬಾಂಬ್ ಬೆದರಿಕೆ ಪ್ರಕರಣ ಮಾಸುವ ಮುನ್ನವೇ ರಾಜಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ.

ನಿನ್ನೆ ರಾತ್ರಿ 11:30ರ ವೇಳೆಗೆ ಎಎನ್‍ಐ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಆರೋಪಿ ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾನೆ. ತಕ್ಷಣ ಎನ್ಐಎ ಅಧಿಕಾರಿಗಳು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆ ಬೆದರಿಕೆ ಜಾಡು ಹಿಡಿದು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಬಾಂಬ್ ಬೆದರಿಕೆ ಕರೆ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.