ರಾಜಸ್ಥಾನದ ಮಾಜಿ ಸಿಎಂ ಜಗನ್ನಾಥ್ ಪಹಾಡಿಯಾ ಅವರು ಕೋವಿಡ್ ಗೆ ಬಲಿ…

113
firstsuddi

ಜೈಪುರ : ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಪಹಾಡಿಯಾ(89) ಅವರು ನಿನ್ನೆ ಕೊರೊನಾದಿಂದ ನಿಧನರಾಗಿದ್ದಾರೆ.

ಮಾಜಿ ಸಿಎಂ ಜಗನ್ನಾಥ್ ಪಹಾಡಿಯಾ ಅವರ ನಿಧನಕ್ಕೆ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಅವರು ಸಂತಾಪ ಸೂಚಿಸಿದ್ದು, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಜಗನ್ನಾಥ್ ಪಹಾಡಿಯಾ ಅವರ ನಿಧನದ ಸುದ್ದಿ ಕೇಳಿ ನನಗೆ ಆಘಾತವಾಯಿತು ಎಂದು ಸಿಎಂ ಅಶೋಕ್ ಗೆಹ್ಲೊಟ್ ಅವರು ಟ್ವೀಟ್ ಮಾಡಿದ್ದಾರೆ.

ಪಹಾಡಿಯಾ ನಿಧನದ ಹಿನ್ನಲೆ ರಾಜಸ್ಥಾನ ರಾಜ್ಯ ಸರ್ಕಾರ ಇಂದು ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದು, ಈ ಸಂದರ್ಭದಲ್ಲಿ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗುವುದು. ಪಹಾಡಿಯಾಗೆ ಸಂತಾಪ ಸೂಚಿಸಲು ಗುರುವಾರ ಮಧ್ಯಾಹ್ನ 12 ಗಂಟೆಗೆ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ.