ರಾಜೀನಾಮೆ ನೀಡುವಂತೆ ಸಚಿವ ಈಶ್ವರಪ್ಪಗೆ ಹೈಕಮಾಂಡ್ ಸೂಚನೆ…

57
firstsuddi

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ.

ಘಟನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಹೈಕಮಾಂಡ್ ಮಾತುಕತೆ ನಡೆಸಿದ್ದು, ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ, ಈಶ್ವರಪ್ಪ ವಿರುದ್ಧದ ಆರೋಪ ಸೇರಿ ವಿಸ್ತೃತವಾದ ಮಾಹಿತಿಯನ್ನು ಪಡೆದುಕೊಂಡಿದೆ. ಅಲ್ಲದೇ ಹೈಕಮಾಂಡ್ ನ ಕೆಲ ನಾಯಕರೊಂದಿಗೆ ದೂರವಾಣಿ ಮೂಲಕ ಸಚಿವ ಈಶ್ವರಪ್ಪ ಮಾತುಕತೆ ನಡೆಸಿದ್ದು, ಘಟನೆಯ ಬಗ್ಗೆ ವಿವರ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ.