‘ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ’ ಗೆ ಆರ್.ಅಶ್ವಿನ್, ಮಿಥಾಲಿ ರಾಜ್ ಹೆಸರು ಶಿಫಾರಸು…

121
firstsuddi

ನವದೆಹಲಿ : ಟೀಂ ಇಂಡಿಯಾ ಸ್ಪಿನ್ನರ್ ಆರ್. ಅಶ್ವಿನ್ ಮತ್ತು ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರ ಹೆಸರನ್ನು ‘ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ’ಗೆ ಬಿಸಿಸಿಐ ಶಿಫಾರಸು ಮಾಡಿದೆ ಎಂಬ ಮಾಹಿತಿ ತಿಳಿದುಬಂದಿದೆ.

34 ವರ್ಷದ ಬೌಲಿಂಗ್ ಆಲ್ ರೌಂಡರ್ ಅಶ್ವಿನ್ ಅವರು 2010 ರಲ್ಲಿ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದಾಗಿನಿಂದ ಇದುವರೆಗೆ 79 ಟೆಸ್ಟ್, 111 ಏಕದಿನ ಮತ್ತು 46 ಅಂತರಾಷ್ಟ್ರೀಯ ಟಿ20ಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ಅದೇ ರೀತಿ 38 ವರ್ಷದ ಭಾರತ ಮಹಿಳಾ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಏಕದಿನ ಕ್ರಿಕೆಟ್ ನಲ್ಲಿ 7,000 ಕ್ಕೂ ಅಧಿಕ ರನ್ ಗಳಿಸಿದ ಮೊದಲ ಮಹಿಳಾ ಅಟಗಾರ್ತಿಯೆಂಬ ವಿಶ್ವದಾಖಲೆಯನ್ನು ಬರೆದಿದ್ದರು. ಭಾರತೀಯ ಕ್ರಿಕೆಟ್ ತಂಡಕ್ಕೆ ಈ ಇಬ್ಬರು ನೀಡಿರುವ ಕೊಡುಗೆಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಪ್ರತಿಷ್ಠಿತ ‘ಖೇಲ್ ರತ್ನ’ ಪ್ರಶಸ್ತಿಗೆ ಇವರ ಹೆಸರುಗಳನ್ನು ಕಳುಹಿಸಿಕೊಟ್ಟಿದೆ.

ಇನ್ನು ಕೆ.ಎಲ್. ರಾಹುಲ್, ಶಿಖರ್ ಧವನ್ ಮತ್ತು ಜಸ್ಪ್ರೀತ್ ಬುಮ್ರಾ ಅವರ ಹೆಸರನ್ನು ‘ಅರ್ಜುನ ಪ್ರಶಸ್ತಿ’ಗೆ ಶಿಫಾರಸು ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಕಳೆದ ವರ್ಷ ಭಾರತ ಕ್ರಿಕೆಟ್ ತಂಡದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದಿದ್ದರು.