ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ ಅವರಿಗೆ ತಟ್ಟಿದ ಪ್ರತಿಭಟನೆಯ ಬಿಸಿ…

200
firstsuddi

ಹುಬ್ಬಳ್ಳಿ : ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪ್ರತಿಭಟನೆಯ ಬಿಸಿ ತಟ್ಟಿದ್ದು, ಸಿಎಎ, ಎನ್​​ಆರ್​​ಸಿ  ವಿರೋಧಿಗಳು ಅಮಿತ್ ಶಾ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮಿತ್ ಶಾ ಅವರು ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಅಮಿತ್ ಶಾ ಅವರು ಆಗಮಿಸುವುದಕ್ಕೂ ಮೊದಲೇ ಸಿಎಎ, ಎನ್​​ಆರ್​​ಸಿ ವಿರೋಧಿಗಳು ಕಪ್ಪು ಬಟ್ಟೆ ಧರಿಸಿಕೊಂಡು ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಅಲ್ಲದೇ ಗ್ಯಾಸ್ ತುಂಬಿದ ಕಪ್ಪು ಬಲೂನ್‍ಗಳನ್ನು ಮೇಲಕ್ಕೆ ಹಾರಿಸಿದ್ದಾರೆ. ಸದ್ಯ ಪ್ರತಿಭಟನೆ ನಡೆಸುತ್ತಿದ್ದ 80ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.