ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ 15 ಕೊರೊನಾ ಪ್ರಕರಣ ದಾಖಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ. ಧಾರವಾಡ-4, ಮಳವಳ್ಳಿ-3, ಬೀದರ್-2, ಬಾಗಲಕೋಟೆ, ರಾಯಭಾಗ, ಬೆಂಗಳೂರು ನಗರ ಹಾಗೂ ದೊಡ್ಡಬಳ್ಳಾಪುರದಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿನ #ಕೋವಿಡ್19 ಪ್ರಕರಣಗಳ ಮಾಹಿತಿ
ರಾಜ್ಯದಲ್ಲಿ ಈವರೆಗೆ 247 #ಕೋವಿಡ್19 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ಆರು ಮಂದಿ ಮೃತಪಟ್ಟಿದ್ದು, 59 ಮಂದಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
ಹೊಸ 15 ಪ್ರಕರಣಗಳ ವಿವರ, ಜಿಲ್ಲಾವಾರು ಪ್ರಕರಣಗಳು, ತಬ್ಲಿಘಿ ಜಮಾತ್ ನಲ್ಲಿ ಭಾಗವಹಿಸಿದವರು ಆರೋಗ್ಯ ಸಹಾಯವಾಣಿ ಸಂಪರ್ಕಿಸಲು ಸೂಚನೆ, 1/2 pic.twitter.com/rKIAI8ZdNV
— CM of Karnataka (@CMofKarnataka) April 13, 2020










