ರಾಜ್ಯದಲ್ಲಿ ಇಂದು 13 ವರ್ಷದ ಬಾಲಕ ಸೇರಿ 5 ಕೊರೊನಾ ಪ್ರಕರಣ ಪತ್ತೆ-ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆ…

256
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಮತ್ತೆ ಐವರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಕಲಬುರಗಿ ಒಂದೇ ಜಿಲ್ಲೆಯಲ್ಲಿ 13 ವರ್ಷದ ಬಾಲಕ ಸೇರಿ ಐವರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ಸರ್ಕಾರದಿಂದ ಮಾಹಿತಿ ತಿಳಿದು ಬಂದಿದೆ. ರಾಜ್ಯದಲ್ಲಿ ಈವರೆಗೆ 359 ಸೋಂಕಿತರ ಪೈಕಿ 16 ಮಂದಿ ಸೋಂಕಿಗೆ ಬಲಿಯಾಗಿದ್ದರೆ, 111 ಮಂದಿ ಗುಣಮುಖರಾಗಿದ್ದಾರೆ.