ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 248 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,781ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಮಧ್ಯಾಹ್ನದ ಹೆಲ್ತ್ ಬುಲೆಟಿನ್‍ನಲ್ಲಿ 178 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಸಂಜೆಯ ಹೆಲ್ತ್ ಬುಲೆಟಿನ್‍ನಲ್ಲಿ 70 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಾಗಿದೆ.










