ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 416 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 8697 ಕ್ಕೆ ಏರಿಕೆಯಾಗಿದೆ. ಅಲ್ಲದೇ ಮಹಾಮಾರಿ ಕೊರೊನಾ ಸೋಂಕಿಗೆ ಇಂದು 9ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 132ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್‍ನ ಮಾಹಿತಿ ಪ್ರಕಾರ ರಾಜ್ಯದಲ್ಲಿ 8697 ಮಂದಿ ಸೋಂಕಿತರ ಪೈಕಿ 5391 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, 3170 ಮಂದಿ ಸೋಂಕಿತರು ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.










