ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ವರುಣನ ಆರ್ಭಟ…

53
firstsuddi

ಬೆಂಗಳೂರು : ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ ಸುರಿಯಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ನಿನ್ನೆ ಗುಡುಗು ಸಹಿತ ಮಳೆಯಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಮೇ 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ.