ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ-ಮೃತರ ಸಂಖ್ಯೆ 17ಕ್ಕೆ ಏರಿಕೆ…

182
firstsuddi

ಕಲಬುರಗಿ : ಮಹಾಮಾರಿ ಕೊರೊನಾ ವೈರಸ್‍ಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಲಬುರಗಿಯ 80 ವರ್ಷದ ವೃದ್ಧ ಸೋಂಕಿಗೆ ಬಲಿಯಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ತಿಳಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ಕಲಬುರಗಿಯಲ್ಲಿ ಕಳೆದ 3 ವರ್ಷಗಳಿಂದ ಪಾರ್ಕಿನ್ಸನ್ ನಿಂದ ಬಳಲುತ್ತಿದ್ದ 80 ವರ್ಷದ ಹಿರಿಯರು ನಿನ್ನೆ ಸಾವನ್ನಪ್ಪಿದ್ದಾರೆ. ಮೊನ್ನೆ ಅವರಿಗೆ ಜ್ವರ ಇದ್ದುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಿನ್ನೆ ಬೆಳಿಗ್ಗೆ 9 ಗಂಟೆಗೆ ಅವರು ವಿಧಿವಶರಾಗಿದ್ದಾರೆ. ನಿನ್ನೆ ರಾತ್ರಿ 9ಕ್ಕೆ ಮೃತರ ವರದಿ ಬಂದಿದ್ದು, ಕೋವಿಡ್-19 ಪಾಸಿಟಿವ್ ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಕಲಬುರಗಿಯಲ್ಲಿ ಕೊರೊನಾಗೆ ಇದು 4ನೇ ಸಾವಾಗಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.