ರಾಜ್ಯದಲ್ಲಿ ನಿನ್ನೆ ಒಂದೇ ದಿನ 1,694 ಮಂದಿ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 19,710ಕ್ಕೆ ಏರಿಕೆ…

127
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಸೋಮಕಿತರ ಸಂಖ್ಯೆ 20 ಸಾವಿರ ಗಡಿ ಸಮೀಪಿಸುತ್ತಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 1694 ಮಂದಿ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 19,710ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 21 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 293ಕ್ಕೆ ಏರಿಕೆಯಾಗಿದೆ. ಬೆಂಗಳೂರು ಒಂದರಲ್ಲೇ 994 ಮಂದಿ ಸೋಂಕಿತರು ಪತ್ತೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 19,710 ಮಂದಿ ಸೋಂಕಿತರ ಪೈಕಿ 8,805 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 10,608 ಮಂದಿ ಸೋಂಕಿತರಿಗೆ ರಾಜ್ಯದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.