ರಾಜ್ಯದಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ-27ಕ್ಕೆ ಏರಿದ ಸೋಂಕಿತರ ಸಂಖ್ಯೆ-ಸಚಿವ ಬಿ.ಶ್ರೀರಾಮುಲು.

204
firstsuddi

ಮೈಸೂರು : ದುಬೈನಿಂದ ಆಗಮಿಸಿದ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ತಗುಲಿರುವುದಾಗಿ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಹಾಗೂ ಶ್ರೀರಾಮುಲು ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದುಬೈಯಿಂದ ಆಗಮಿಸಿದ ಮೈಸೂರು ಮೂಲದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಪ್ರತಿ ಜಿಲ್ಲೆಯಲ್ಲೂ ಕೊರೊನ ಚಿಕಿತ್ಸಾ ಕೇಂದ್ರವನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಈ ಕುರಿತು ನಿನ್ನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದ್ದಾರೆ. ಸ್ಕ್ಯಾನರ್ ಕಂಪನಿಯೊಂದಿಗೆ ವೆಂಟಿಲೇಟರ್ ಪೂರೈಕೆ ಬಗ್ಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನು ನಡೆಸಿದ್ದೇವೆ. 10 ಲಕ್ಷ ಎನ್95 ಮಾಸ್ಕ್, 5 ಪಿಪಿಇ ಕಿಟ್, ತ್ರಿ ಲೇಯರ್ ಮಾಸ್ಕ್ 15 ಲಕ್ಷ ಖರೀದಿಗೆ ನಿರ್ಧರಿಸಲಾಗಿದೆ. ನಾಳೆಯಿಂದ ಎಲ್ಲಾ ಜಿಲ್ಲೆಗಳಿಗೂ ಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತೇವೆ ಎಂದರು.