ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ : ಬಿ.ಎಸ್. ಯಡಿಯೂರಪ್ಪ…

172
firstsuddi

ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ವೇಳೆ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು, ಕಳೆದ ಒಂದು ವರ್ಷದಿಂದ ಜನರು ಅಭಿವೃದ್ಧಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದರು. ಪ್ರತಿಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಾನು ಕೆಲಸ ಮಾಡುತ್ತೇನೆ. ನಮ್ಮ ಜವಾಬ್ದಾರಿ ದೊಡ್ಡದಿದೆ. ಜನರ ಆಸೆ ಆಕಾಂಕ್ಷೆಗಳು ಹೆಚ್ಚಿದೆ. ನಾನು ಯಾವುದೇ ಸೇಡಿನ ರಾಜಕೀಯ ಮಾಡುವುದಿಲ್ಲ. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.