ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾ.ಫಣೀಂದ್ರ ಪ್ರಮಾಣ ವಚನ ಸ್ವೀಕಾರ…

76
firstsuddi

ಬೆಂಗಳೂರು : ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

2020ರ ಡಿಸೆಂಬರ್ 16ರಂದು ನಿವೃತ್ತ ನ್ಯಾಯಮೂರ್ತಿ ಎನ್.ಆನಂದ್ ಅವರು ಉಪ ಲೋಕಾಯುಕ್ತ ಹುದ್ದೆಯಿಂದ ನಿವೃತ್ತರಾದಾಗಿನಿಂದಲೂ ಈ ಹುದ್ದೆ ಖಾಲಿ ಇತ್ತು. ಮಾರ್ಚ್ 22ರಂದು ರಾಜ್ಯಪಾಲರು ನ್ಯಾಯಮೂರ್ತಿ ಫಣೀಂದ್ರ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ಇಂದು ನ್ಯಾ. ಫಣೀಂದ್ರ ಅವರು ತಮ್ಮ ಅಧಿಕಾರ ಸ್ವೀಕರಿಸಿದ್ದಾರೆ.