ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಳಗಾವಿಯ ಜೋಯಿಡಾ ಉಪ ವಿಭಾಗದ ಎಇಇ ಉದಯ ಚಬ್ಬಿ, ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಎಇ ಮಹಾದೇವಪ್ಪ ಎಂಬುವವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಖಚಿತ ಮಾಹಿತಿಯ ಆಧಾರದ ಮೇಲೆ ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಮನೆಯಲ್ಲಿದ್ದ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.










