ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಜೈರಾಮ್ ರಮೇಶ್, ಲೆಹರ್ ಸಿಂಗ್.

111
firstsuddi

ನವದೆಹಲಿ : ರಾಜ್ಯಸಭಾ ಸದಸ್ಯರಾಗಿ ಕರ್ನಾಟಕದಿಂದ ಆಯ್ಕೆಯಾದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಜೈರಾಮ್ ರಮೇಶ್, ಲೆಹರ್ ಸಿಂಗ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವಿವಿಧ ರಾಜ್ಯಗಳಿಂದ ರಾಜ್ಯಸಭೆಗೆ ಚುನಾಯಿತರಾದ ಪಿಯೂಷ್ ಗೋಯೆಲ್, ಲಕ್ಷ್ಮಿಕಾಂತ್ ಬಾಜಪೇಯ್, ಮುಕುಲ್ ವಾಸ್ನಿಕ್, ಸುರೇಂದ್ರ ಕುಮಾರ್, ಧನಜಯ್ ಮಧು, ಸೇರಿ 24 ಮಂದಿ ಸದಸ್ಯರು ಕೂಡ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಭಾಧ್ಯಕ್ಷ ವೆಂಕಯ್ಯನಾಯ್ಡು ಉಪಸ್ಥಿತರಿದ್ದರು.

ನಟ ಜಗ್ಗೇಶ್ ಕನ್ನಡ ಭಾಷೆಯಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಇಂಗ್ಲಿಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ಹಿರಿಯ ನಾಯಕ ಲೆಹರ್ ಸಿಂಗ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.