ರಾಜ್ಯಸಭೆಯಲ್ಲಿ ಅಮಿತ್ ಶಾ ಅವರಿಂದ ಪೌರತ್ವ ತಿದ್ದುಪಡಿ ಮಸೂದೆ ಮಂಡನೆ…

205
firstsuddi

ನವದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪೌರತ್ವ ತಿದ್ದುಪಡಿ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಮಂಡನೆಯಾಗಿದ್ದು, ತೀವ್ರ ಚರ್ಚೆ ನಡೆಯುತ್ತಿದೆ. ಲೋಕಸಭೆಯಲ್ಲಿ ಭಾರಿ ಬಹುಮತ ಹೊಂದಿದ್ದ ಕಾರಣ ಈ ಮಸೂದೆ ಮಂಡನೆಯಾಗಿದೆ. ಬಳಿಕ ಈ ಕುರಿತು ಮಾತನಾಡಿದ ಅಮಿತ್ ಶಾ ಅವರು ಪೌರತ್ವ ತಿದ್ದುಪಡಿ ಮಸೂದೆಯಿಂದಾಗಿ ಭಾರತೀಯ ಮುಸ್ಲಿಮರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಭಾರತೀಯ ಮುಸ್ಲಿಮರು ಎಂದೆಂದಿಗೂ ಭಾರತೀಯ ಪೌರರೇ. ಸರ್ಕಾರ ಸಂವಿಧಾನ ಬದ್ಧವಾಗಿ ಕೆಲಸ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.
ನಾವು ಪೌರತ್ವ ತಿದ್ದುಪಡಿ ಮಸೂದೆ ತರುವುದಾಗಿ ಹಿಂದಿನ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲೆ ಉಲ್ಲೇಖಿಸಿದ್ದೆವು. ಈ ಮಸೂದೆಯಿಂದಾಗಿ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ಥಾನ ದೇಶಗಳಲ್ಲಿ ಧಾರ್ಮಿಕ ಕಿರುಕುಳದಿಂದ ಬೇಸತ್ತು ಭಾರತಕ್ಕೆ ಬಂದ ಮುಸ್ಲಿಮರಿಗೆ ಸಹಕಾರಿಯಾಗುತ್ತದೆ. ಆದರೆ ಬೇರೆ ದೇಶಗಳ ಮುಸ್ಲಿಮರಿಗೆ ಯಾವುದೇ ಪೌರತ್ವವನ್ನು ನೀಡುವುದಿಲ್ಲ ಎಂದು ತಿಳಿಸಿದರು. ಈ ಮಸೂದೆ ಮಂಡನೆಯಾಗಿದ್ದರಿಂದ ಕೋಟ್ಯಾಂತರ ಜನರು ನೆಮ್ಮದಿಯಿಂದ ಜೀವನ ನಡೆಸಲು ಸಹಕಾರಿಯಾಗುತ್ತದೆ. ನಾವು ಯಾವುದೇ ವೋಟ್ ಬ್ಯಾಂಕ್‍ಗಾಗಿ ಈ ಮಸೂದೆಯನ್ನು ಮಂಡನೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.