ರಾಜ್ಯ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ ; ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರಿಂದ ಸ್ವಾಗತ…

83
firstsuddi

ಚಾಮರಾಜನಗರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ರಾಜ್ಯ ಪ್ರವೇಶಿಸಿದ್ದು, ರಾಜ್ಯ ಕಾಂಗ್ರೆಸ್ ನಾಯಕರು ಕೆಕ್ಕನಹಳ್ಳ ಚೆಕ್ ಪೋಸ್ಟ್ ಬಳಿ ತೆರಳಿ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಿದರು.

ಈ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ. ಪಾಟೀಲ್, ಆರ್.ವಿ. ದೇಶಪಾಂಡೆ, ವೀರಪ್ಪ ಮೊಯಿಲಿ, ಕೆ.ಜೆ. ಜಾರ್ಜ್ ಸೇರಿದಂತೆ ಹಲವು ನಾಯಕರುಗಳು ಭಾಗಿಯಾಗಿದ್ದರು.

ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದ ಎದುರು ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಇದಾದ ಬಳಿಕ, ರಾಹುಲ್ ಗಾಂಧಿ ಅಂಬೇಡ್ಕರ್ ಭವನದಿಂದ ವೀರನಪುರ ಗೇಟ್ ವರೆಗೂ 4 ಕಿಮೀ ಪಾದಯಾತ್ರೆ ನಡೆಸಲಿದ್ದಾರೆ.