ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ನಲ್ಲಿ ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ವಲಯಕ್ಕೆ 4552 ಕೋಟಿ ರೂ. ನಿಗದಿಪಡಿಸಿದ್ದಾರೆ.
• ಬಸವಕಲ್ಯಾಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ.
• ಕ್ರೀಡಾಪಟುಗಳಿಗೆ ಉತ್ತಮ ತರಬೇತಿ, ಉತ್ತೇಜನ ನೀಡಲು, ತರಬೇತುದಾರರು ಮತ್ತು ತಾಂತ್ರಿಕ ಸಿಬ್ಬಂದಿಯ ಕೌಶಲ್ಯ ಅಭಿವೃದ್ಧಿಗೆ 5 ಕೋಟಿ ರೂ.ಗಳ ಅನುದಾನ.
• ಅನಂತ ಕುಮಾರ್ ಪ್ರತಿಷ್ಠಾನದ ವತಿಯಿಮಧ ನಾಯಕತ್ವ ನಿರ್ಮಾಣ ಹಾಗೂ ನೀತಿ ನಿರೂಪಣಾ ಸಂಶೋಧನಾ ಸಂಸ್ಥೆ ಸ್ಥಾಪನೆಗೆ 20 ಕೋಟಿ ರೂ. ಅನುದಾನ.
• ಬೆಂಗಳೂರು ನಗರದ ನಾಲ್ಕೂ ದಿಕ್ಕಿನಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ರವೀಂದ್ರ ಕಲಾಕ್ಷೇತ್ರದ ಮಾದರಿಯಲ್ಲಿ ಕಲಾಕ್ಷೇತ್ರಗಳ ನಿರ್ಮಾಣ.
• ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 100 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ.
• ಸಂತ ಶಿಶುನಾಳ ಶರೀಫರ ಸಮಾಧಿ ಇರುವ ಹಾವೇರಿ ಜಿಲ್ಲೆ ಶಿಶುನಾಳದ ಅಭಿವೃದ್ದಿಗೆ 5 ಕೋಟಿ ರೂ. ಅನುದಾನ.
• ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ. ಎಸ್ ನಿಜಲಿಂಗಪ್ಪನವರ ಚಿತ್ರದುರ್ಗದ ಮನೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗೆ 5 ಕೋಟಿ. ರೂ ಅನುದಾನ
• ಖ್ಯಾತ ಸಾಹಿತಿ ಶ್ರೀ ಎಸ್.ಎಲ್. ಭೈರಪ್ಪನವರ ಹುಟ್ಟೂರು, ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದ ಅಭಿವೃದ್ಧಿಗೆ 5 ಕೋಟಿ ರೂ.
• ಲಂಬಾಣಿ ಸಂಸ್ಕೃತಿ ಭಾಷಾ ಅಕಾಡೆಮಿ ಸ್ಥಾಪನೆಗೆ 50 ಲಕ್ಷ ರೂ ಅನುದಾನ.
• ಬೆಂಗಳೂರಿನಲ್ಲಿ ಒಟ್ಟು 500 ಕೋಟಿ ರೂಗಳ ವೆಚ್ಚದಲ್ಲಿ ಖಾಸಗಿ ಸಹಭಾಗಿತ್ದೊಂದಿಗೆ ಜಾಗತಿಕ ಗುಣಮಟ್ಟದ ಫಿಲಂ ಸಿಟಿ ಸ್ಥಾಪನೆ.
• ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 5 ಕೋಟಿ ರೂ.
• 60 ವರ್ಷ ಮೀರಿದ ಬಡವರಿಗೆ ಉಚಿತವಾಗಿ ರಾಜ್ಯ ಹಾಗೂ ದೇಶದ ಪ್ರಸಿದ್ಧ ತೀರ್ಥ ಕ್ಷೇತ್ರ ದರ್ಶಿಸಲು ‘ಜೀವನ ಚೈತ್ರ ಯಾತ್ರೆ’ ಯೋಜನೆ ಜಾರಿ, 20 ಕೋಟಿ ರೂ. ಅನುದಾನ.
• ಪ್ರವಾಸಿಗರನ್ನು ಸೆಳೆಯುವ ಜಾಹೀರಾತು ಮತ್ತು ಇತರ ಚಟುವಟಿಕೆಗಳಿಗೆ 100 ಕೋಟಿ ರೂ ಹಾಗೂ ರಾಜ್ಯದ ಪ್ರವಾಸೋಧ್ಯಮದ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ.
• ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿರುವ ಮಿನಿ ಮೃಗಾಲಯ ಉನ್ನತೀಕರಿಸಲು 5 ಕೋಟಿ ರೂ. ಅನುದಾನ.
• ರಾಮನಗರ ಜಿಲ್ಲೆಯ ರಣಹದ್ದು ಧಾಮದಲ್ಲಿ 2 ಕೋಟಿ ರೂ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ಸ್ಥಾಪನೆ.










