ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಿಟಿ ರವಿ.

116
firstsuddi

ಚಿಕ್ಕಮಗಳೂರು : ರಾಜ್ಯ ಸರ್ಕಾರದ ನೈಟ್ ಕರ್ಫ್ಯೂ ಆದೇಶಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು, ನಮ್ಮದೇ ಸರ್ಕಾರದ ಆದೇಶವನ್ನು ಸರಿ-ತಪ್ಪು ಎಂದು ವ್ಯಾಖ್ಯಾನ ಮಾಡೋಕಾಗಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಗೆ ಭಯಪಡಬೇಕಿಲ್ಲವೆಂದು ವಿಜ್ಞಾನಿಗಳೇ ಹೇಳಿದ್ದಾರೆ. ಮೂಗು ಇರುವವರಿಗೆ ನೆಗಡಿ ತಪ್ಪಲ್ಲ, ನೆಗಡಿ ಬಂದರೆ ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ. ಆಕಸ್ಮಾತ ಓಮಿಕ್ರಾನ್ ಬಂದರು ಕೂಡಾ ಸೌಮ್ಯ ಪರಿಣಾಮ ಬೀರುತ್ತೇ ಎಂದು ಬೇರೆ ಬೇರೆ ವೈರಾಲಜಿ ವಿಜ್ಞಾನಿಗಳು ಹೇಳಿದ್ದಾರೆ. ಸರ್ಕಾರ ಕೂಡ ಜನರನ್ನ ಅನಗತ್ಯ ಭಯಕ್ಕೆ ಒಳಪಡಿಸಬಾರದು ಎಂದರು.

ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ನಾಳೆಯಿಂದ(ಡಿ.28) 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಜನವರಿ 7 ರ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.