ರಾಜ್ಯ ಸಾರಿಗೆ ಬಸ್ ದರ ಹೆಚ್ಚಳದ ಪ್ರಸ್ತಾವನೆಯೇ ಇಲ್ಲ : ಲಕ್ಷ್ಮಣ್ ಸವದಿ.

117
Firstsuddi

ವಿಜಯಪುರ : ರಾಜ್ಯ ಸಾರಿಗೆ ಬಸ್ ದರ ಹೆಚ್ಚಳದ ಪ್ರಸ್ತಾವನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂಕಷ್ಟದಿಂದ ಈಗ ಜನರು ತೊಂದರೆಯಲ್ಲಿದ್ದಾರೆ. ಕಳೆದ ವರ್ಷವೇ ಬಸ್ ದರ ಹೆಚ್ಚಿಸಲಾಗಿದ್ದು, ಮತ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಯಾವುದೇ ಕಾರಣಕ್ಕೂ ಹೆಚ್ಚಳ ಮಾಡುವ ಪ್ರಸ್ತಾವನೆಯೇ ಇಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.