ರಾಮನಗರ : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು…

119
firstsuddi

ರಾಮನಗರ : ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೆಂಗಳೂರು-ಮೈಸೂರು ಹೆದ್ದಾರಿಯ ಕುಂಭಾಪುರ ಗೇಟ್ ಬಳಿ ನಡೆದಿದೆ.

ಸುಂದ್ರೇಶ್ (49) ಮತ್ತು ಅವರ ಮಗಳು ತನ್ಮಯ್ (9) ಮೃತ ದುರ್ದೈವಿಗಳು. ಇನ್ನೂ ಘಟನೆಯಲ್ಲಿ ಶೀಲಾ, ಗಾನವಿ, ಸಾನ್ವಿ ಎಂಬುವರು ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಮಾರುತಿ ಓಮ್ನಿ ಕಾರಿನಲ್ಲಿ ಕುಟುಂಬವು ಮದ್ದೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.