ರಾಮನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ – ರಾಹುಲ್‍ಗೆ ಪತ್ರ ಬರೆದ ಅಯೋಧ್ಯೆ ಪ್ರಧಾನ ಅರ್ಚಕ.

42
firstsuddi

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಶುಭ ಹಾರೈಸಿ ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರು ಪತ್ರವೊಂದನ್ನು ಬರೆದಿದ್ದಾರೆ.

ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ರಾಹುಲ್ ಗಾಂಧಿಗೆ ಪತ್ರ ಬರೆದು, ಶ್ರೀರಾಮನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ಹಾರೈಸಿದ್ದಾರೆ.

ನಿಮ್ಮ ಈ ಹೋರಾಟಕ್ಕೆ ಯಶಸ್ಸು ಸಿಗಲಿದೆ ಎಂದು ನಾನು ಭಾವಿಸುತ್ತೇನೆ. ಹಾಗೆಯೇ ಅದಕ್ಕಾಗಿ ಪ್ರಾರ್ಥಿಸುತ್ತೇನೆ. ದೇವರು ನಿಮಗೆ ಆಯುಷ್ಯ, ದೀರ್ಘಾಯುಷ್ಯ ನೀಡಿ ಕಾಪಾಡಲಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಮೂಲಕ ದೇಶವನ್ನು ಒಗ್ಗೂಡಿಸುವ ಕಾಂಗ್ರೆಸ್ ಕ್ರಮಕ್ಕೆ ತಮ್ಮ ಬೆಂಬಲವನ್ನು ನೀಡಿದರು.

ಭಾರತ್ ಜೋಡೋ ಯಾತ್ರೆಯು ಡಿಸೆಂಬರ್ 24ರಂದು ರಾಷ್ಟ್ರ ರಾಜಧಾನಿ ದೆಹಲಿಯನ್ನು ಪ್ರವೇಶಿಸಿತ್ತು. ಚಳಿಗಾಲದ ವಿಶ್ತಾಂತಿ ಪಡೆದುಕೊಂಡು 9 ದಿನಗಳ ಬಳಿಕ ಇಂದು ಪುನರಾರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಉತ್ತರಪ್ರದೇಶ ಪ್ರವೇಶಿಸಲಿದೆ.