ಅಯೋಧ್ಯೆ : ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ ಬರೋಬ್ಬರಿ 22 ಕೋಟಿ ಮೌಲ್ಯದ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿವೆ ಎನ್ನಲಾಗುತ್ತಿದೆ.
ಜನವರಿ 15ರಿಂದ ಆರಂಭವಾಗಿದ್ದ ದೇಣಿಗೆ ಸಂಗ್ರಹ ಅಭಿಯಾನದಲ್ಲಿ ದೇಶಾದ್ಯಂತ ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ಅಪಾರ ಪ್ರಮಾಣದಲ್ಲಿ ದೇಣಿಗೆ ಸಂಗ್ರಹಿಸಿತ್ತು.
ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಲೆಕ್ಕಪರಿಶೋಧನಾ ವರದಿಯ ಪ್ರಕಾರ, ಬ್ಯಾಂಕ್ ಖಾತೆಗಳಲ್ಲಿ ಹಣದ ಕೊರತೆ ಅಥವಾ ಕೆಲವು ತಾಂತ್ರಿಕ ದೋಷದಿಂದಾಗಿ ಚೆಕ್‌ಗಳು ಬೌನ್ಸ್ ಆಗಿವೆ ಎಂದು ಹೇಳಲಾಗುತ್ತಿದ್ದು, ತಾಂತ್ರಿಕ ದೋಷಗಳ ಸಮಸ್ಯೆಯನ್ನು ಪರಿಹರಿಸಲು ಬ್ಯಾಂಕುಗಳು ಕಾರ್ಯನಿರ್ವಹಿಸುತ್ತಿವೆ ಮತ್ತು ಅವರು ಮತ್ತೆ ದೇಣಿಗೆ ನೀಡುವಂತೆ ಜನರನ್ನು ಕೇಳುತ್ತಿದ್ದಾರೆ ಎಂದು ಟ್ರಸ್ಟ್ ಸದಸ್ಯ ಡಾ.ಅನಿಲ್ ಮಿಶ್ರಾ ಅವರು ಹೇಳಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.