ಚಿಕ್ಕಮಗಳೂರು – ರಾಷ್ಟ್ರಕವಿ ಕುವೆಂಪು ಅವರ ಕೃತಿಗಳ ಅಧ್ಯಯನ ಮತ್ತು ಮನನದಿಂದ ವಿಶ್ವಮಾನವರಾಗಲು ಸಾಧ್ಯವಾಗುತ್ತದೆ ಎಂದು ಲೇಖಕಿ ವಾಣಿ ಚಂದ್ರಯ್ಯನಾಯ್ಡು ಹೇಳಿದರು.ಜಿಲ್ಲಾ ಕಸಾಪ ಮತ್ತು ಕುಂಭಕ ಸಾಂಸ್ಕøತಿಕ ಪ್ರತಿಷ್ಠಾನ ನಗರದ ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಕುಂಭಕ ಸಾಹಿತ್ಯ ಸಿರಿ ಪ್ರಶಸ್ತಿ ಪ್ರಧಾನ ಹಾಗೂ ದಿ|| ಬೆಳಗೋಡು ಲೋಕಪ್ಪಗೌಡ ಮತ್ತು ದಿ|| ಹೆಚ್.ಬಿ.ಭೈರೇಗೌಡ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಎಲ್ಲರೂ ಮೈಗೂಡಿಸಿಕೊಂಡಲ್ಲಿ ಸಮಾಜದಲ್ಲಿ ಬೇರೂರಿರುವ ಮೇಲುಕೀಳು, ್ತ ಜಾತೀಯತೆಯ ಪಿಡುಗು ನಿವಾರಣೆಯಾಗುತ್ತದೆ ಎಂದ ಅವರು ವಿದ್ಯಾರ್ಥಿಗಳು ಈ ಹಿನ್ನೆಲೆಯಲ್ಲಿ ಪಠ್ಯದ ಜೊತೆಗೆ ಕುವೆಂಪು ಅವರ ಸಂದೇಶಗಳನ್ನೂ ಓದಬೇಕು ಎಂದು ಕಿವಿಮಾತು ಹೇಳಿದರು.
ಕುವೆಂಪು ವಿಶ್ವಮಾನವ ಸಂದೇಶ ಮತ್ತು ಸಮಾನತೆಯ ತುಡಿತ ವಿಷಯ ಕುರಿತು ಉಪನ್ಯಾಸ ನೀಡಿದ ಬಿಎಸ್‍ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಹಿತ್ಯವನ್ನೂ ಅಧ್ಯಯನ ಮಾಡಬೇಕು ಎಂದು ಸಲಹೆ ಮಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಕಾರ್ಯಕ್ರಮಕ್ಕೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.ಕುಂಭಕ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಸಾಹಿತಿ ಬೆಳವಾಡಿ ಮಂಜುನಾಥ್ ಅವರಿಗೆ ಪ್ರಧಾನ ಮಾಡಲಾಯಿತು. ಪ್ರಶಸ್ತಿಯೊಂದಿಗೆ ಬಂದ ನಗದು ಪುರಸ್ಕಾರವನ್ನು ಐ ಡಿ ಎಸ್ ಜಿ ಕಾಲೇಜಿನ ವಿದ್ಯಾರ್ಥಿನಿ ಬಿ.ಎಸ್.ನಿವೇದಿತಾ ಅವರಿಗೆ ಮಂಜುನಾಥ್ ನೀಡಿದರು.ಜಿಲ್ಲಾ ಕಸಾಪ ಗೌರವ ಸಲಹೆಗಾರರಾದ ಸೂರಿ ಪ್ರಭು, ತಾಜುದ್ದೀನ್, ತಾಲ್ಲೂಕು ಅಧ್ಯಕ್ಷ ಹಿರೇಮಗಳೂರು ಪುಟ್ಟಸ್ವಾಮಿ, ಶಿಕ್ಷಕ ರುದ್ರಪ್ಪ, ಭದ್ರಮ್ಮ, ಚಂಚಲ, ಶಾಲೆಯ ಕಾರ್ಯದರ್ಶಿ ಜಿ.ಕೆ.ಬಸವರಾಜ್, ಮುಖ್ಯಶಿಕ್ಷಕ ಆರ್.ಎಂ.ಉಮಾಮಹೇಶ್ವರಪ್ಪ ಉಪಸ್ಥಿತರಿದ್ದರು.ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಿ.ಎಂ.ಮಂಜುನಾಥ ಸ್ವಾಮಿ ಕಾರ್ಯಕ್ರಮವನ್ನು ನಿರೂಪಿಸಿದರು, ಖಜಾಂಚಿ ಪ್ರೊ|| ಕೆ.ಎನ್.ಲಕ್ಷ್ಮೀಕಾಂತ್ ಸ್ವಾಗತಿಸಿದರು, ಶಿಕ್ಷಕ ನೀಲಕಂಠಪ್ಪ ವಂದಿಸಿದರು.